Saturday, September 17, 2022
HomeOur ActivitiesEducationಜಮೀಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ

ಜಮೀಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ

ಜಮೀಯತುಲ್ ಫಲಾಹ್ ಮಂಗಳೂರು ತಾಲೂಕು ಯುನಿಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಕಂಕನಾಡಿ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಿತು.

ಜಮೀಯತುಲ್ ಫಲಾಹ್ ಸಂಸ್ಥೆಯ ಜಿಲ್ಲಾಧ್ಯಕ್ಷ ಶಬೀಹ್ ಅಹ್ಮದ್ ಖಾಝಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ ವೇತನ ಪಡೆದ ಮಕ್ಕಳು ಮುಂದೆ ತಮ್ಮ ವಿದ್ಯಾಭ್ಯಾಸ ಮುಗಿಸಿ ತಮಗೆ ವಿದ್ಯಾರ್ಥಿ ವೇತನ ನೀಡಿದ ಸಂಸ್ಥೆಯನ್ನು ಬೆಳೆಸುವಲ್ಲಿ ಸಕ್ರೀಯಗೊಳಿಸಬೇಕೆಂದು ಹೇಳಿದರು.

ಜಮೀಯತುಲ್ ಫಲಾಹ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಫಝಲ್ ರಹೀಂ ವಿದ್ಯಾರ್ಥಿ ವೇತನವನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರು ಮುಸ್ಲಿಂ ಸಮುದಾಯ ಸಾಮಾಜಿಕ ಮತ್ತು ಆರ್ಥಿಕವಾಗಿ ಮೇಲೆ ಬರಬೇಕೆಂದರೆ ಅವರು ಮೊದಲು ಶೈಕ್ಷಣಿಕವಾಗಿ ಮುಂದೆ ಬರಬೇಕು. ಈ ಒಂದು ದೂರದೃಷ್ಠಿ ಇಟ್ಟು ಕೊಂಡು ನಮ್ಮ ಹಿರಿಯರು ಜಮೀಯತುಲ್ ಫಲಾಹ್ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಜಮೀಯತುಲ್ ಫಲಾಹ್ ಸಂಸ್ಥೆಯ ಜಿಲ್ಲಾಧ್ಯಕ್ಷ ಶಬೀಹ್ ಅಹ್ಮದ್ ಖಾಝಿ, ಪ್ರಧಾನ ಕಾರ್ಯದರ್ಶಿ ಫಝಲ್ ರಹೀಂ, ಕೋಶಾಧಿಕಾರಿ ಎಫ್.ಎಂ ಬಶೀರ್ ಅವರನ್ನು ಸನ್ಮಾನಿಸಲಾಯಿತು.ಜಮೀಯತುಲ್ ಫಲಾಹ್ ಸಂಸ್ಥೆಯ ಮಂಗಳೂರು ತಾಲೂಕು ಯುನಿಟ್ ಕೋಶಾಧಿಕಾರಿ ಹಾಜಿ ಇಬ್ರಾಹಿಂ ಕೋಡಿಜಾಲ್, ಕೊಣಾಜೆ ಗ್ರೀನ್ ವೀವ್ ಶಾಲೆಯ ಸಂಚಾಲಕ ಫರ್ವಿಝ್ ಆಲಿ ಮೊದಲಾದವರು ಉಪಸ್ಥಿತರಿದ್ದರು.

ಜಮೀಯತುಲ್ ಫಲಾಹ್ ಸಂಸ್ಥೆಯ ಮಂಗಳೂರು ತಾಲೂಕು ಯುನಿಟ್ ಅಧ್ಯಕ್ಷ ಎಂ.ಎಚ್ ಮಲಾರ್ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು, ಸದಸ್ಯರಾದ ಕೆ.ಎಂ.ಕೆ ಮಂಜನಾಡಿ ಅಭಿನಂದನಾ ಭಾಷಣ ಮಾಡಿದರು, ಮೊಹಮ್ಮದ್ ಸಮಾನತ್ ಕಿರಾಅತ್ ಪಠಿಸಿದರು, ಜಮೀಯತುಲ್ ಫಲಾಹ್ ಸಂಸ್ಥೆಯ ಮಂಗಳೂರು ತಾಲೂಕು ಕಾರ್ಯದರ್ಶಿ ಅಹ್ಮದ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು, ಜಮೀಯತುಲ್ ಫಲಾಹ್ ಸಂಸ್ಥೆಯ ಮಂಗಳೂರು ತಾಲೂಕು ಜೊತೆ ಕಾರ್ಯದರ್ಶಿ ಇರ್ಫಾನ್ ವಂದಿಸಿದರು.

Date

Education Events

ಸ್ಕಾಲರ್ ಶಿಪ್ ವಿತರಣೆ

ಬೆಳ್ತಂಗಡಿ, 12 ಡಿಸೇಂಬರ್ 2021: ಜಮೀಯ್ಯತುಲ್ ಫಲಾಹ್ ಬೆಳ್ತಂಗಡಿ ಘಟಕ (ರಿ) ಇದರ ವತಿಯಿಂದ ಸ್ಕಾಲರ್ ಶಿಪ್ ವಿತರಣಾ ಕಾರ್ಯಕ್ರಮವು ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಸರಕಾರ ಕಂದಾಯ ಇಲಾಖೆಯ ಮುಖ್ಯ ಆಯುಕ್ತ...

Tags By Most Viewed